ಲಕ್ನೋ : ಬಿಜೆಪಿ ಅಧಿಕಾರದಲ್ಲಿರುವ 12 ರಾಜ್ಯಗಳ ಮುಖ್ಯಂತ್ರಿಗಳು ವಾರಣಾಸಿಗೆ ಭೇಟಿ ನೀಡಿದ ಬೆನ್ನಲ್ಲೇ ಇದೀಗ ಭಾರತದ 100 ಮೇಯರ್ಗಳು ಕಾಶಿಗೆ ಭೇಟಿ ನೀಡಿದ್ದಾರೆ.
ಇಂದು ವಾರಣಾಸಿಯಲ್ಲಿ ಅಖಿಲ ಭಾರತ ಮೇಯರ್ಗಳ ಸಮ್ಮೇಳನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯ ಸಂಸದರಾದ ಬಳಿಕ ಕಾಶಿಯ ಬದಲಾಗಿ ಅಭಿವೃದ್ಧಯತ್ತ ಸಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕಾಶಿ ಮಾದರಿ ಅಭಿವೃದ್ಧಿಯ ದರ್ಶನ ಮೇಯರ್ಗಳಿಗೆ ಆಗಬೇಕು ಹಾಗೂ ಅವರು ಕೂಡ ತಮ್ಮ ನಗರದಗಳಲ್ಲಿ ಈ ಮಾದರಿ ಅವಳಪಡಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಕಾಶಿಯಲ್ಲಿ ಮೇಯರ್ಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ವಾರಣಾಸಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಮೇಯರ್ಗಳ ಸಮ್ಮೇಳನದಲ್ಲಿ ರಾಜ್ಯದಿಂದ 5 ಮಂದಿ ಭಾಗವಹಿಸಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಆಗಿ ಸಮ್ಮೇಳನಕ್ಕೆ ಚಾಲನೆ ನೀಡಿ ಭಾಷಣ ಮಾಡಲಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸಹ ಈ ಸಭೆಯಲ್ಲಿ ಭಾಗವಹಿಸಿದ್ದಾರೆ.