ಉಗ್ರರನ್ನು ಪೋಷಿಸುವ ಪಾಕ್‌ಗೆ ಮತ್ತಷ್ಟು ಪೆಟ್ಟುಕೊಟ್ಟ ಕೇಂದ್ರ: ಮೇಲ್‌ಗಳು, ಪಾರ್ಸೆಲ್‌ಗಳ ವಿನಿಮಯಕ್ಕೂ ಬ್ರೇಕ್‌

Sampriya

ಶನಿವಾರ, 3 ಮೇ 2025 (18:42 IST)
Photo Credit X
ನವದೆಹಲಿ: ಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನ ವಿರುದ್ಧ ಕೇಂದ್ರ ಸರ್ಕಾರವು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುತ್ತಿದೆ. ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಏಟು ನೀಡುತ್ತಲೇ ಇದೆ.

ಪಾಕಿಸ್ತಾನದಿಂದ ಬರುವ ಎಲ್ಲಾ ವರ್ಗದ ಮೇಲ್‌ಗಳು ಮತ್ತು ಪಾರ್ಸೆಲ್‌ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ

ಇದಕ್ಕೂ ಮುನ್ನ ಪಾಕಿಸ್ತಾನದಿಂದ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆಮದಾಗುವ ಎಲ್ಲಾ ಸರಕುಗಳ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಭಾರತ ನಿರ್ಬಂಧ ಹೇರಿರುವುದಾಗಿ ವಾಣಿಜ್ಯ ಸಚಿವಾಲಯವು ಅಧಿಸೂಚನೆ ಹೊರಡಿಸಿತ್ತು.

ವಿದೇಶಿ ವ್ಯಾಪಾರ ನೀತಿ 2023ರ ಅನ್ವಯ ಈ ಘೋಷಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರಲಿದೆ. ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಜನಿಕ ನೀತಿಯ ಹಿತದೃಷ್ಠಿಯಿಂದ ಈ ನಿರ್ಬಂಧ ಹೇರಲಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶಕರು ತಿಳಿಸಿದ್ದಾರೆ.

ಈ ನಿಷೇಧಕ್ಕೆ ಯಾವುದೇ ವಿನಾಯಿತಿ ಬೇಕಿದ್ದರೆ ಭಾರತ ಸರ್ಕಾರದ ಅನುಮೋದನೆ ಪಡೆಯಬೇಕಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ