ಸರ್ಕಾರಿ ಉದ್ಯೋಗಿಯ `ವಿಚ್ಛೇದಿತ ಪುತ್ರಿಗೆ ಅನುಕಂಪದ ಉದ್ಯೋಗ' ನೀಡಲಾಗದು : ಸುಪ್ರೀಂಕೋರ್ಟ್

ಮಂಗಳವಾರ, 14 ಸೆಪ್ಟಂಬರ್ 2021 (10:25 IST)
ನವದೆಹಲಿ :  ಸರ್ಕಾರಿ ಉದ್ಯೋಗಿಯ ವಿಚ್ಛೇದಿತ ಪುತ್ರಿಗೆ ಅನುಕಂಪದ ನೌಕರಿಯ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದ್ದು, ಸರ್ಕಾರಿ ನೌಕರರು ಮರಣ ಹೊಂದಿದ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅಂತಹ ಸಂದರ್ಭದಲ್ಲಿ ವಿಚ್ಛೇದಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗದು ಎಂದು ಹೇಳಿದೆ.

ದಿ.ಪಿ. ಭಾಗ್ಯಮ್ಮ ಅವರು ಮಂಡ್ಯ ಜಿಲ್ಲೆಯ ಖಜಾನೆಯಲ್ಲಿ ಸೆಕೆಂಡ್ ಡಿವಿಜನ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು . ಅನುಕಂಪದ ಆಧಾರದ ಮೇರೆಗೆ ಅವರ ಪುತ್ರಿ ವಿ. ಸೌಮ್ಯಶ್ರೀ ಅವರಿಗೆ ಉದ್ಯೋಗ ನೀಡುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಖಜಾನೆ ನಿರ್ದೇಶಕರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಸೌಮಶ್ರೀ ಅವರು ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯಲು ಅರ್ಹರಲ್ಲ ಎಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎನ್ .ಆರ್.ಶಾ ಮತ್ತು ನ್ಯಾ ಅನಿರೊದ್ಧ ಬೋಸ್ ನ್ಯಾಯಪೀಠ ಈ ತೀರ್ಪು ನೀಡಿದೆ.
ಉದ್ಯೋಗವನ್ನೇ ಅವಲಂಬಿಸಿದ್ದ ಮದುವೆಯಾಗದ ಅಥವಾ ವಿಧವೆ ಪುತ್ರಿಗೆ ಮಾತ್ರ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬಹುದಾಗಿದೆ. ಸರ್ಕಾರಿ ಉದ್ಯೋಗಿಯ ವಿಚ್ಛೇದಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಅವಕಾಶವಿಲ್ಲ ಎಂದು ಪೀಠಿಕೆ ಹೇಳಿಕೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ