ನವದೆಹಲಿ : ಪಕ್ಕದ ಮನೆಯ ವ್ಯಕ್ತಿಯೊಬ್ಬ ಯಾರು ಇಲ್ಲದ ಸಂದರ್ಭದಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಈಶಾನ್ಯ ದೆಹಲಿಯಲ್ಲಿ ನಡೆದಿದೆ.
ಸಂತ್ರಸ್ತೆ ಹಾಗೂ ಆರೋಪಿಯ 2 ಕುಟುಂಬಗಳು ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಜೊತೆಗೆ 2 ಕುಟುಂಬಗಳು ಕೂಲಿ ಕೆಲಸವನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಆರೋಪಿಯು ಬಾಲಕಿಯು ಒಬ್ಬಂಟಿಯಾಗಿ ನೋಡಿದ ನಂತರ ಅವಳೊಂದಿಗೆ ಅನುಚಿತವಾಗಿ ವರ್ತಿಸಿ ಅತ್ಯಾಚಾರ ಎಸಗಿದ್ದಾನೆ.
ಈ ಕುರಿತು ಸಂತ್ರಸ್ತೆಯ ತಾಯಿಯು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ನೆರ ಮನೆಯ ವ್ಯಕ್ತಿಯೊಬ್ಬ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.