ಹುಟ್ಟುಹಬ್ಬದಂದೇ ಸಾವನ್ನಪ್ಪಿದ ಬಾಲಕಿ! ಏನಾಯ್ತು ಗೊತ್ತ?
ಫೆಬ್ರವರಿ 13ರಂದು ಈ ಘಟನೆ ನಡೆದಿದ್ದು, ಶಿವ ಮತ್ತು ಭಾನುಮತ್ ಅವರ ಪುತ್ರಿ ತೇಜಸ್ವಿ ತನ್ನ ಹುಟ್ಟುಹಬ್ಬದ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದಳು.
ಆಕೆಯ ಪೋಷಕರು ಅತಿಥಿಗಳನ್ನು ಭೇಟಿ ಮಾಡಲು ಮತ್ತು ಊಟ ಬಡಿಸಲು ಹೋದಾಗ, ತೇಜಸ್ವಿ ಅಡುಗೆಮನೆಗೆ ಹೋಗಿ ಕುರ್ಚಿ ಮೇಲೆ ಹತ್ತಿ ಆಟವಾಡುತ್ತಿದ್ದ ವೇಳೆ ಬಿಸಿ ಸಾಂಬಾರ್ ತುಂಬಿದ ಪಾತ್ರೆಯಲ್ಲಿ ಬಿದ್ದಿದ್ದಾಳೆ.
ವಿಪರೀತ ಸುಟ್ಟ ಗಾಯಗೊಂಡಿದ್ದರಿಂದ ತೇಜಸ್ವಿ ಸಾವನ್ನಪ್ಪಿದ್ದಾಳೆ. ಸದ್ಯ ಪೊಲೀಸರು ಈ ಘಟನೆ ಸಂಬಂಧ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.