ಹೈದರಾಬಾದ್ : ಎರಡು ಮಕ್ಕಳನ್ನು ಹೊಂದಿರುವ 30 ವರ್ಷದ ಮಹಿಳೆ 15 ವರ್ಷದ ಬಾಲಕನೊಂದಿಗೆ ಓಡಿ ಹೋಗಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ.
ಗುಡಿವಾಡ ಪಟ್ಟಣದಲ್ಲಿ ವಾಸಿಸುತ್ತಿದ್ದ ಮಹಿಳೆ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಬಾಲಕನೊಂದಿಗೆ ನಿಕಟ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಜುಲೈ 19ರಂದು ನಾಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಈ ಕುರಿತಂತೆ ಬಾಲಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಆರೋಪಿಯನ್ನು ಸ್ವಪ್ನಾ ಎಂದು ಗುರುತಿಸಲಾಗಿದ್ದು, ಬಾಲಕ ಹಾಗೂ ಮಹಿಳೆ ಒಂದೇ ಪ್ರದೇಶದಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.