ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

Sampriya

ಮಂಗಳವಾರ, 14 ಅಕ್ಟೋಬರ್ 2025 (22:25 IST)
Photo Credit X
ರೋಹ್ಟಕ್‌: ದೇಶದಾದ್ಯಂತ ಹರಿಯಾಣ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಆತ್ಮಹತ್ಯೆ‌ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಶರಣಾದ ಘಟನೆ  ರೋಹ್ಟಕ್ ನಲ್ಲಿ ವರದಿಯಾಗಿದೆ. 

ರೋಹ್ಟಕ್‌ನ ಸೈಬರ್ ಸೆಲ್‌ನಲ್ಲಿ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿ ಸಂದೀಪ್ ಕುಮಾರ್ ಅವರು ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂದೀಪ್ ಅವರು ಸಾವಿಗೆ ಮುನ್ನ ರೆಕಾರ್ಡ್ ಮಾಡಲಾದ ವಿಡಿಯೋ ಸಂದೇಶದಲ್ಲಿ, ವೈ ಪೂರಣ್ ಕುಮಾರ್ ಒಬ್ಬ "ಭ್ರಷ್ಟ ಪೊಲೀಸ್" ಆಗಿದ್ದು, ತನ್ನ ಭ್ರಷ್ಟಾಚಾರ ಬಯಲಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನೂ ವೈ ಪೂರಣ್ ಕುಮಾರ್ ಅವರನ್ನು ರೋಹ್ಟಕ್ ವ್ಯಾಪ್ತಿಯಲ್ಲಿ ನಿಯೋಜಿಸಿದ ನಂತರ, ಅವರು ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳನ್ನು ಭ್ರಷ್ಟ ಅಧಿಕಾರಿಗಳೊಂದಿಗೆ ನಂಟು ಬೆಳೆಸಲು ಆರಂಭಿಸಿದರು. 

ಇನ್ನೂ ವರ್ಗಾವಣೆ ಕೇಳಿದವರಿಗೆ ಕರೆ ಮಾಡಿ ಹಣ ಕೇಳಿ‌ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು. 

ಮಾಡಿದವರಿಗೆ ಈ ಜನ ಫೈಲ್‌ಗಳನ್ನು ತಡೆ ಹಿಡಿದರು. ವರ್ಗಾವಣೆ ಕೋರಿದವರಿಗೆ ಕರೆ ಮಾಡಿ ಹಣ ಕೇಳುವ ಮೂಲಕ ಅವರನ್ನು ಮಾನಸಿಕವಾಗಿ ಹಿಂಸೆ ನೀಡಿದರು. 

ವರ್ಗಾವಣೆಗೆ ಪ್ರತಿಯಾಗಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲಾಯಿತು ಎಂದು ಗಂಭೀರ ಆರೋಪ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ