ಆರು ವರ್ಷದ ಬಾಲಕಿಯ ಮೃತದೇಹದ ಮೇಲೆ ಅತ್ಯಾಚಾರ ಎಸಗಿದ ಕಾಮುಕ
ಮಂಗಳವಾರ, 30 ಏಪ್ರಿಲ್ 2019 (07:37 IST)
ಡೆಹ್ರಾಡೂನ್ : ಆರು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿದ್ದಲ್ಲದೇ ಆಕೆಯ ಮೃತದೇಹದ ಮೇಲೆ ಅತ್ಯಾಚಾರ ಮಾಡಿದ ಅಮಾನವೀಯ ಘಟನೆ ಉತ್ತರಾಖಂಡ್ ನಲ್ಲಿ ನಡೆದಿದೆ.
ಪೋಷಕರು ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದು, ಈ ವೇಳೆ ತನ್ನ ಗೆಳೆಯರ ಜೊತೆ ಆಟವಾಡುತ್ತಿದ್ದ ಬಾಲಕಿಯನ್ನು ಮನೆ ಬಳಿ ಇದ್ದ ಪೌಲ್ಟ್ರಿ ಫಾರಂ ಸೆಕ್ಯುರಿಟಿ ಗಾರ್ಡ್ ಅಪಹರಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ ನಡೆಸಲು ಮುಂದಾಗಿದ್ದಾನೆ. ಈ ವೇಳೆ ಬಾಲಕಿ ಕಿರುಚಾಡಿದ್ದಕ್ಕೆ ಕೋಪಗೊಂಡು ಆಕೆಯನ್ನ ಕೊಲೆ ಮಾಡಿದ್ದಾನೆ. ಬಳಿಕ ಬಾಲಕಿಯ ಶವದ ಮೇಲೆಯೇ ಅತ್ಯಾಚಾರವೆಸಗಿದ್ದಾನೆ.
ಇತ್ತ ಮನೆಯವರು ಬಾಲಕಿ ಕಾಣದಿದ್ದಾಗ ಆಕೆಗಾಗಿ ಹುಡುಕಾಟ ನಡೆಸಿದಾಗ ಆಕೆಯ ಶವ ಕಾಡಿನಲ್ಲಿ ಪತ್ತೆಯಾಗಿದೆ. ತಕ್ಷಣ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಆರೋಪಿ ಪೌಲ್ಟ್ರಿ ಫಾರಂ ಸೆಕ್ಯುರಿಟಿ ಗಾರ್ಡ್ ಎಂಬುದಾಗಿ ತಿಳಿದುಬಂದಿದ್ದ ಕಾರಣ ಆತನನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.