ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ?

ಸೋಮವಾರ, 20 ಜೂನ್ 2022 (08:43 IST)
ನವದೆಹಲಿ : ಅಗ್ನಿಪಥ್ ವಿರೋಧದ ನಡುವೆಯೇ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ.

ಅಗ್ನಿಪಥ್ ವಿರೋಧಿಸಿ ಈಗಾಗಲೇ ದೇಶದ್ಯಾಂತ ಪ್ರತಿಭಟನೆ ನಡೆಯುತ್ತಿದೆ. ಉತ್ತರಪ್ರದೇಶ, ಬಿಹಾರ ಹಾಗೂ ತೆಲಂಗಾಣಗಳಲ್ಲಿ ಪ್ರತಿಭಟನೆಯೂ ಹಿಂಸಾತ್ಮಕಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ರೈಲು ಬೋಗಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಇಲಾಖೆ, ಅಗ್ನಿವೀರರಿಗೆ 10% ಮೀಸಲಾತಿ ನೀಡಿದ್ದು, ಅಂPಈ ಮತ್ತು ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ಮೀಸಲಾತಿ ನೀಡಲಾಗಿದೆ ಎಂದು ತಿಳಿಸಿದೆ.

ಅಷ್ಟೇ ಅಲ್ಲದೇ ಎರಡು ಪಡೆಗಳ ನೇಮಕಾತಿಯಲ್ಲಿ ಅಗ್ನಿವೀರರಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು 3 ವರ್ಷಕ್ಕೆ ಸಡಿಲಿಕೆ ಮಾಡಿದ್ದು, ಅಗ್ನಿವೀರ್ ಮೊದಲ ಬ್ಯಾಚ್ ನೇಮಕಾತಿಗೆ 5 ವರ್ಷ ಸಡಿಲಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ