ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ
ಕಣಿವೆಯಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ನಾಲ್ವರು ಭಯೋತ್ಪಾದಕರು ಈ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಮೂರರಿಂದ ನಾಲ್ಕು ಭಯೋತ್ಪಾದಕರ ಗುಂಪಿನ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಪಡೆದ ನಂತರ ಜಂಟಿ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು (CASO) ಪ್ರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.