ಶೌಚಾಲಯದಲ್ಲಿ ಬಾಯಿ ಮುಚ್ಚಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ವಿದ್ಯಾರ್ಥಿ

ಶುಕ್ರವಾರ, 20 ಡಿಸೆಂಬರ್ 2019 (11:15 IST)
ಮಧ್ಯಪ್ರದೇಶ : 10 ನೇ ತರಗತಿಯ ವಿದ್ಯಾರ್ಥಿಯೊಬ್ಬ 5ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಮಧ್ಯಪ್ರದೇಶದ ಜಬಲ್ಪುರ್ದಲ್ಲಿ ನಡೆದಿದೆ.



ಡಿಸೆಂಬರ್ 5 ರಂದು 5ನೇ ತರಗತಿಯ ವಿದ್ಯಾರ್ಥಿನಿ ಶೌಚಾಲಯಕ್ಕೆ ತೆರಳಿದ್ದ ವೇಳೆ ಅಲ್ಲಿಗೆ ಬಂದ  10 ನೇ ತರಗತಿಯ ವಿದ್ಯಾರ್ಥಿ  ಆಕೆಯ ಬಾಯಿ ಮುಚ್ಚಿ ಅತ್ಯಾಚಾರ ಎಸಗಿದ್ದಲ್ಲದೇ ಯಾರಿಗೆ ತಿಲಿಸದಂತೆ ಬೆದರಿಕೆ ಹಾಕಿದ್ದಾನೆ. ಆದರೆ ಇತ್ತೀಚೆಗೆ ಆಕೆಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.


ಈ ಬಗ್ಗೆ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ