ಜನರ ಮೇಲೆ ಹರಿದ ಟ್ರಕ್! 6 ಮಂದಿ ದುರ್ಮರಣ, 10 ಮಂದಿಗೆ ಗಾಯ

ಸೋಮವಾರ, 5 ಡಿಸೆಂಬರ್ 2022 (09:38 IST)
ಭೋಪಾಲ್ : ಬಸ್ಗಾಗಿ ಕಾಯುತ್ತಾ ನಿಲ್ದಾಣದಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ವೇಗವಾಗಿ ಬಂದ ಟ್ರಕ್ ಹರಿದು 6 ಮಂದಿ ಮೃತಪಟ್ಟಿರುವ ದುರಂತ ಘಟನೆ ಮಧ್ಯಪ್ರದೇಶದ ರತ್ಲಮ್ ಜಿಲ್ಲೆಯಲ್ಲಿ ನಡೆದಿದೆ.
 
ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಎಂಟು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿಲ್ಲಾಧಿಕಾರಿ ನರೇಂದ್ರ ಕುಮಾರ್ ಸೂರ್ಯವಂಶಿ ತಿಳಿಸಿದ್ದಾರೆ.

ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ