ಜೈಪುರ : ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿ ಕೊಲೆಗೈದಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಯನ್ನು ಶಕೂರ್ ಎಂದು ಗುರುತಿಸಲಾಗಿದೆ. ಗುರುವಾರ ಈ ಘಟನೆ ನಡೆದಿದ್ದು, 30 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಮೈಮೇಲೆ ರಾಸಾನಿಕಗಳನ್ನು ಸುರಿದು ನಂತರ ಬೆಂಕಿ ಹಚ್ಚಿದ್ದಾನೆ ಎಂದು ಪಚ್ಪದ್ರಾ ಪೊಲೀಸ್ ಠಾಣೆ ಎಸ್ಹೆಚ್ಓ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.
ಆರೋಪಿ ಶಕೂರ್ ಸಂತ್ರಸ್ತೆಯ ಮನೆ ಸಮೀಪ ವಾಸಿಸುತ್ತಿದ್ದು, ಆತನನ್ನು ಬಂಧಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಆತ ಆಕೆಯನ್ನು ಅತ್ಯಾಚಾರ ಮಾಡಿ ಮೈಮೇಲೆ ರಾಸಾಯನಿಕ ಸುರಿದು ನಂತರ ಬೆಂಕಿ ಹಚ್ಚಿದ್ದಾನೆ. ಬೆಂಕಿಯಿಂದ ಶೇ. 40ರಷ್ಟು ಸುಟ್ಟ ಗಾಯಗಳಾಗಿರುವ ಮಹಿಳೆಗೆ ಜೋಧ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಕೆ ಚಿಕಿತ್ಸೆಗೆ ಸ್ಪಂದಿಸಿದೆ ಕೊನೆಯುಸಿರೆಳೆದಿದ್ದಾಳೆ.