ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಶವವಾಗಿ ಪತ್ತೆ?

ಸೋಮವಾರ, 2 ಜನವರಿ 2023 (14:08 IST)
ನವದೆಹಲಿ : ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಮಹಿಳೆಯೊಬ್ಬಳು ಶವವಾಗಿ ಪತ್ತೆಯಾದ ಘಟನೆ ದೆಹಲಿಯ ಮಂಗೋಲ್ಪುರ ಕಲನ್ ಗ್ರಾಮದಲ್ಲಿ ನಡೆದಿದೆ.

ಮಂಗೋಲ್ಪುರ ಕಲನ್ ಗ್ರಾಮದ ಮನೆಯೊಂದರ 2ನೇ ಮಹಡಿಯಲ್ಲಿ 36 ವರ್ಷದ ಮಹಿಳೆಯ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮಹಿಳೆ ಉತ್ತರ ಪ್ರದೇಶದ ಆಗ್ರಾ ನಿವಾಸಿಯಾಗಿದ್ದು, ಆಕೆ ಆಗ್ರಾ ಮೂಲದ ವ್ಯಕ್ತಿಯೊಂದಿಗೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದಳು.

ಈ ಇಬ್ಬರು ಒಟ್ಟಾಗಿ ಇರುವುದನ್ನು ಮನೆ ಮಾಲೀಕರು ಅನೇಕ ಬಾರಿ ನೋಡಿದ್ದರು. ಆದರೆ ನಿನ್ನೆ ಮನೆಯ ಬಾಗಿಲು ಅರ್ಧ ತೆಗೆದಿರುವುದನ್ನು ಗಮನಿಸಿದ ಮನೆ ಮಾಲೀಕ ಒಳಗೆ ಹೋಗಿ ನೋಡಿದ್ದಾರೆ. ಅಲ್ಲಿ ಮಹಿಳೆ ಶವವಾಗಿ ಬಿದ್ದಿದ್ದಳು. ಅಷ್ಟೇ ಅಲ್ಲದೇ ಲಿವ್ ಇನ್ ರಿಲೇಶನ್ನಲ್ಲಿದ್ದ ವ್ಯಕ್ತಿ ನಾಪತ್ತೆ ಆಗಿದ್ದ.

ಘಟನೆಗೆ ಸಂಬಂಧಿಸಿ ಕೂಡಲೇ ರೋಹಿಣಿ ದಕ್ಷಿಣ ಪೊಲೀಸ್ ಠಾಣೆಗೆ ಮನೆ ಮಾಲೀಕ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಶವವನ್ನು ವಶಕ್ಕೆ ಪಡೆದು, ಪೋಸ್ಟ್ ಮಾರ್ಟಂಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಷ್ಟೇ ಅಲ್ಲದೇ ಮಹಿಳೆಯ ಶವದ ಮೇಲೆ ಯಾವುದೇ ಗಾಯದ ಗುರುತುಗಳಿರಲಿಲ್ಲ.

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಿವ್ ಇನ್ ರಿಲೇಶನ್ನಲ್ಲಿದ್ದ ವ್ಯಕ್ತಿಗೆ ಕರೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಆತನ ಫೋನ್ ಸ್ವಿಚ್ ಆಫ್ ಆಗಿದ್ದು, ಮನೆಯಿಂದ ನಾಪತ್ತೆ ಆಗಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ