ಯುವಕನ ಹಲ್ಲೆಗೈದು ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ!

ಮಂಗಳವಾರ, 18 ಜುಲೈ 2023 (11:55 IST)
ಜೈಪುರ್ : ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಗೆಳೆಯನ ಮುಂದೆಯೇ ಸಾಮೂಹಿಕ ಅತ್ಯಾಚಾರವೆಸಗಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಮಂದರ್ ಸಿಂಗ್, ಧರಂಪಾಲ್ ಸಿಂಗ್ ಮತ್ತು ಭಾತಮ್ ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರಕ್ಕೂ ಮುನ್ನ ಆರೋಪಿಗಳು ಬಾಲಕಿಯ ಗೆಳೆಯನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬಾಲಕಿ ಹಾಗೂ ಆಕೆಯ ಗೆಳೆಯ ಶನಿವಾರ ಅಜ್ಮೀರ್ನಿಂದ ರಾತ್ರಿ 10:30 ರ ಸುಮಾರಿಗೆ ಬಸ್ನಲ್ಲಿ ಜೋಧ್ಪುರಕ್ಕೆ ಬಂದಿದ್ದಾರೆ. ಬಳಿಕ ಉಳಿದುಕೊಳ್ಳಲು ರೂಮ್ ಪಡೆಯಲು ಅತಿಥಿ ಗೃಹಕ್ಕೆ ತೆರಳಿದ್ದರು. ಆದರೆ ಅಲ್ಲಿನ ಅತಿಥಿ ಗೃಹದ ಸಿಬ್ಬಂದಿ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ನಂತರ ಅಲ್ಲಿಂದ ಇಬ್ಬರೂ ತೆರಳಿದ್ದಾರೆ.

ಅತಿಥಿ ಗೃಹದ ಹೊರಗೆ ನಿಂತಿದ್ದ ಇಬ್ಬರನ್ನೂ ಮಾತಾಡಿಸಿದ ಆರೋಪಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ. ಬಳಿಕ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ಯುತ್ತಿರುವುದಾಗಿ ನಂಬಿಸಿ ಜೆಎನ್ವಿಯು ಕ್ಯಾಂಪಸ್ ಬಳಿಯ ಕ್ರೀಡಾಂಗಣಕ್ಕೆ ಕಳುಹಿಸಿದ್ದಾರೆ. ಅಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅತಿಥಿಗೃಹದ ಮೇಲ್ವಿಚಾರಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ