ಮನೆಯಲ್ಲಿ ಏಕಾಂಗಿಯಾಗಿದ್ದ ಯುವತಿಯ ಮೇಲೆ ರೇಪ್

ಸೋಮವಾರ, 20 ನವೆಂಬರ್ 2023 (10:22 IST)
25 ವರ್ಷ ವಯಸ್ಸಿನ ಯುವತಿ ಮೇಲೆ ಅತ್ಯಾಚಾರ ಮಾಡಿದ ಘಟನೆ ದೆಹಲಿಯ ನೋಯಿಡಾ ಪ್ರದೇಶದಲ್ಲಿ ವರದಿಯಾಗಿದೆ. ಆರೋಪಿ ಶಂಭುಲಿಂಗ(27 ವರ್ಷ)  ಎಂಬವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಯುವತಿಗೆ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.
 
 ಅತ್ಯಾಚಾರ ಪ್ರಕರಣಗಳಿಗೆ ಬ್ರೇಕ್  ಬೀಳುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಮೇಲಿಂದ ಮೇಲೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದೆ. ಶಾಲಾ ಮಕ್ಕಳ ಮೇಲೆ ಅತ್ಯಾಚಾರದ ಪ್ರಕರಣಗಳು ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿರುವ ನಡುವೆ, ಕೆಲವು ಜಿಲ್ಲೆಗಳಲ್ಲಿ ಶಾಲಾ ಬಾಲಕಿಯರು ಮತ್ತು ಯುವತಿಯರ ಮೇಲೆ ಅತ್ಯಾಚಾರದ ಘಟನೆಗಳು ವರದಿಯಾಗುತ್ತಿವೆ.
 
ಶಂಭುಲಿಂಗ ಮತ್ತು ಯುವತಿ ಪರಿಚಯಸ್ಥರಾಗಿದ್ದು,  ನಿನ್ನೆ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಗೆ ಬಂದು ಶಂಭುಲಿಂಗ ಅತ್ಯಾಚಾರ ಮಾಡಿದ್ದಾನೆಂದು ಹೇಳಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ