ಉಚಿತ ಅಡುಗೆ ಅನಿಲ ಸಂಪರ್ಕಕ್ಕೆ ಆಧಾರ್ ಕಡ್ಡಾಯ

ಬುಧವಾರ, 8 ಮಾರ್ಚ್ 2017 (17:40 IST)
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬಡ ಮಹಿಳೆಯರಿಗೆ ನೀಡಲಾಗುವ ಉಚಿತ ಎಲ್`ಪಿಜಿ ಕನೆಕ್ಷನ್`ಗೆ ಇನ್ಮುಂದೆ ಅಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ.


ಕಳೆದ ವರ್ಷ ಅಡುಗೆ ಅನಿಲದ ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯಗೊಳಿಸಲಾಗಿತ್ತು. ಇದೀಗ, ಅದೇ ನಿಯಮವನ್ನ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ನೀಡಲಾಗುವ ಉಚಿತ ಅಡುಗೆ ಅನಿಲ ಕನೆಕ್ಷನ್ ಸೇವೆಗೂ ವಿಸ್ತರಿಸಲಾಗಿದೆ.
`ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಸೌಲಭ್ಯವನ್ನ ಪಡೆಯಲು ಇಚ್ಛಿಸುವ ಫಲಾನುಭವಿಗಳು ತಮ್ಮ ಗುರುತಿನ ಚೀಟಿಯಾಗಿ ಆಧಾರ್ ಕಾರ್ಡ್ ನೀಡಬೇಕೆಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದೇವೇಳೆ, ಉಚಿತ ಅಡುಗೆ ಅನಿಲ ಸಂಪರ್ಕ ಪಡೆಯಲು ಇಚ್ಛಿಸುವ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರು ಮಾರ್ಚ್ 31ರ ಒಳಗೆ ಅರ್ಜಿ ಸಲ್ಲಿಕೆ ತಿಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ