ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಆಧಾರ್ ಕಡ್ಡಾಯವಿಲ್ಲ – ಸುಪ್ರೀಂಕೋರ್ಟ್

ಸೋಮವಾರ, 27 ಮಾರ್ಚ್ 2017 (14:06 IST)
ಎಲ್ಲೆಡೆ ಆಧಾರ್ ಕಡ್ಡಾಯಗೊಳಿಸಲು ಮುಂದಾಗಿದ್ದ ಕೇಂದ್ರ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ಕಲ್ಯಾಣ ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಆಧಾರ್ ಕಡ್ಡಾಯದಿಂದಾಗಿ ಫಲಾನುಭವಿಗಳು ಸೌಲಭ್ಯ ವಂಚಿತರಾಗುವ ಸಾಧ್ಯತೆ ಇದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಆಧಾರ್ ಕಡ್ಡಾಯ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ಪ್ರತಿಕ್ರಿಯಿಸಿರುವ ಕೋರ್ಟ್, ಈ ಕುರಿತ ವಿಚಾರಣೆಗೆ 7 ನ್ಯಾಯಮೂರ್ತಿಗಳ ಸಂವಿಧಾನ ಪೀಠ ರಚಿಸಬೇಕಿದೆ. ಆದರೆ, ಸದ್ಯ ಅದು ಸಾಧ್ಯವಿಲ್ಲ ಎಂದು ಹೇಳಿದೆ.

 ಇದೇವೇಳೆ, ಬ್ಯಾಕ್ ಖಾತೆ ಸೇರಿದಂತೆ ಇತರೆ ಪ್ರಕ್ರಿಯೆಗಳಲ್ಲಿ ಅಧಾರ್ ಬಳಕೆ ಮುಂದುವರೆಸುವಂತೆ ಸುಪ್ರೀಂಕೊರ್ಟ್ ಸೂಚಿಸಿದೆ.

ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸದಂತೆ 2015ರಲ್ಲಿ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆದರೂ, ಮಧ್ಯಾಹ್ನದ ಬಿಸಿಯೂಟ ಸೇರಿ 11 ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿತ್ತು.ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಹಿರಿಯ ವಕೀಲ ಶ್ಯಾಮ್ ದಿವಾನ್ ಸುಪ್ರೀಂಕೋರ್ಟ್`ಗೆ ಮೇಲ್ಮನವಿ ಸಲ್ಲಿಸಿದ್ದರು.. 

ಮೊಬೈಲ್ ಸಿಮ್ ಕಾರ್ಡ, ತೆರಿಗೆ ಕಟ್ಟಲು ಮತ್ತು ಡ್ರೈವಿಂಗ್ ಲೈಸೆನ್ಸ್`ಗೂ ಆಧಾರ್ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿತ್ತು.

ವೆಬ್ದುನಿಯಾವನ್ನು ಓದಿ