ಆಮ್ ಆದ್ಮಿ ಪಕ್ಷದಲ್ಲೀಗ ಆಂತರಿಕ ಕಲಹ

ಬುಧವಾರ, 3 ಮೇ 2017 (07:58 IST)
ನವದೆಹಲಿ: ಆಮ್ ಆದ್ಮಿ ಪಕ್ಷದಲ್ಲಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಸೋತ ಮೇಲೆ ಎಲ್ಲವೂ ಸರಿಯಿಲ್ಲ ಎನ್ನುವುದು ಬಹಿರಂಗವಾಗಿದೆ. ನಾಯಕತ್ವದ ವಿರುದ್ಧ ಕುಮಾರ್ ವಿಶ್ವಾಸ್ ತಿರುಗಿಬಿದ್ದಿದ್ದಾರೆ.

 
ತನ್ನ ವಿರುದ್ಧ ಪಕ್ಷದ ನಾಯಕರೇ ಕುತಂತ್ರ ನಡೆಸುತ್ತಿದ್ದಾರೆಂದು ವಿಶ್ವಾಸ್ ಆರೋಪ ಮಾಡಿದ್ದು, ಪಕ್ಷ ಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಸದ್ಯದಲ್ಲೇ ತನ್ನ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಮಾಡುವುದಾಗಿ ಎಚ್ಚರಿಸಿದ್ದಾರೆ.

ವಿಶ್ವಾಸ್ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿಎಂ ಕೇಜ್ರಿವಾಲ್ ಅವರನ್ನು ಸಮಾಧಾನಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ದೆಹಲಿ ಸೋಲಿನ ನಂತರ ಅವರು ಪಕ್ಷದ ಚುಕ್ಕಾಣಿ ಹಿಡಿಯಲು ಬಯಸಿದ್ದರು ಎಂಬ ಸುದ್ದಿ ಹಬ್ಬಿತ್ತು.

ಅದನ್ನು ಅವರು ನಿರಾಕರಿಸಿದ್ದಾರೆ.  ಅಲ್ಲದೆ ತಾನು ಯಾವುದೇ ಆಂದೋಲನ ಅಥವಾ ಬೇರೆ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಕೇಜ್ರಿವಾಲ್ ಅವರನ್ನು ತಣ್ಣಗಾಗಿಸುವ ಯತ್ನ ಮಾಡಿದ್ದಾರೆ. ವಿಶ್ವಾಸ್ ಪಕ್ಷದ ಪ್ರಮುಖ ಆಸ್ತಿ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ