ದೆಹಲಿಯಲ್ಲಿ ಒಂದಾಗಲಿರುವ ಕಾಂಗ್ರೆಸ್-ಎಎಪಿ
ಮುಂಬರುವ ಲೋಕಸಭೆ ಚುನಾವಣೆಗೆ ಈ ಎರಡೂ ಪಕ್ಷಗಳೂ ಒಂದಾಗಿ ಚುನಾವಣೆ ಎದುರಿಸಲು ತೀರ್ಮಾನಿಸಿವೆ. ಈಗಾಗಲೇ ಕರ್ನಾಟಕದಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಉಳಿದ ರಾಜ್ಯಗಳಲ್ಲೂ ಹಲವು ಪ್ರಾದೇಶಿಕ ಪಕ್ಷಗಳ ಜತೆ ಕೈ ಜೋಡಿಸಿವೆ.
ಈ ಮೂಲಕ ಎಲ್ಲಾ ಪಕ್ಷಗಳು ಒಂದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ನಿಲ್ಲಲು ತೀರ್ಮಾನಿಸಿವೆ. ಮೊನ್ನೆ ನಡೆದ ಉಪ ಚುನಾವಣೆಯಲ್ಲಿ ಸಾಧಿಸಿದ ಗೆಲುವು ಕಾಂಗ್ರೆಸ್ ಹಾಗೂ ಇತರ ಮಿತ್ರ ಪಕ್ಷಗಳ ಉತ್ಸಾಹ ಹೆಚ್ಚಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.