ಪಕ್ಷ, ಕುಟುಂಬವನ್ನು ನೋಡದೆಯೇ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳಬೇಕು: ಅನುರಾಗ್ ಠಾಕುರ್
ಈ ಪ್ರಕರಣ ಸಂಬಂಧ ಕುಟುಂಬ ಹಾಗೂ ಪಕ್ಷವನ್ನು ನೋಡದೆಯೇ ಕ್ರಮ ಕೈಗೊಳ್ಳಬೇಕು. ಕರ್ನಾಟಕದಲ್ಲಿಆಡಳಿತದಲ್ಲಿರುವ ಕಾಂಗ್ರೆಸ್ ಯಾಕೆ ಈ ಸಂಬಂಧ ಕ್ರಮ ಕೈಗೊಳ್ಳುತ್ತಿಲ್ಲ. ಈ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾಕೆ ಈ ಪ್ರಕರಣದ ಸಂಬಂಧ ಕ್ರಮ ಕೈಗೊಳರ್ಳುವುದಿಲ್ಲ ಎಂದರು.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಇಡೀ ರಾಜ್ಯವನ್ನೇ ತಲೆ ತಗ್ಗಿಸುವಂತೆ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.