ಉತ್ತರ ಪ್ರದೇಶದ ಸೀತಾಪುರ್‌ದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಮೇಲೆ ಯುವಕನೊಬ್ಬ ಶೂ ಎಸೆದ ಘಟನೆ ವರದಿಯಾಗಿದೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಮೇಲೆ ಶೂ ಎಸೆದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು 'ಕಿಸಾನ್ ಯಾತ್ರಾ' ರ್ಯಾಲಿಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಅಪರಿಚಿತ ಯುವಕನೊಬ್ಬ ರಾಹುಲ್ ಗಾಂಧಿಯವರ ಮೇಲೆ ಶೂ ಎಸೆದಿದ್ದಾನೆ.
ಮುಂದಿನ ವರ್ಷದ ಮಾರ್ಚ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ತೀವ್ರ ತೆರನಾದ ಪೈಪೋಟಿ ಎದುರಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ