ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ರಾಜೀನಾಮೆ

ಸೋಮವಾರ, 12 ಡಿಸೆಂಬರ್ 2022 (11:17 IST)
ನವದೆಹಲಿ : ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸೋಲಾದ ಬಳಿಕ ಭಾರತೀಯ ಜನತಾ ಪಕ್ಷದ ದೆಹಲಿಯ ಅಧ್ಯಕ್ಷ ಆದೇಶ್ ಗುಪ್ತಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆದೇಶ್ ಗುಪ್ತಾ ಅವರ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಅಂಗೀಕರಿಸಿದ್ದಾರೆ. ವೀರೇಂದ್ರ ಸಚ್ದೇವ ಅವರನ್ನು ಈಗ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಮುಂದಿನ ದೆಹಲಿ ಬಿಜೆಪಿ ಅಧ್ಯಕ್ಷರ ನೇಮಕವಾಗುವವರೆಗೆ ಸಚ್ದೇವ ಹಂಗಾಮಿ ಅಧ್ಯಕ್ಷರಾಗಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಂಸಿಡಿ ಚುನಾವಣೆಯ ಸೋಲಿನ ನೈತಿಕ ಹೊಣೆಯನ್ನು ನಾನು ಹೊತ್ತುಕೊಂಡಿದ್ದೇನೆ. ನಾವು ಎಂಸಿಡಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುತ್ತೇವೆಂದು ನಿರೀಕ್ಷಿಸಿದ್ದೆವು. ಆದರೆ ಅದು ಸಾಧ್ಯವಾಗಿಲ್ಲ. ಹೀಗಾಗಿ ನಾನು ಈ ನಿರ್ಧಾರವನ್ನು ಕೈಗೊಂಡಿದ್ದೇನೆ ಎಂದು ಗುಪ್ತಾ ತಿಳಿಸಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ