ರಾಜ್ಯದಲ್ಲಿ ಆಡಳಿತ ಸಂಪೂರ್ಣ ಸ್ಥಗಿತಗೊಂಡಿದೆ: ಕರುಣಾ ನಿಧಿ

ಮಂಗಳವಾರ, 11 ಅಕ್ಟೋಬರ್ 2016 (15:09 IST)
ತಮಿಳುನಾಡಿನಲ್ಲಿ ಆಡಳಿತ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಡಿಎಂಕೆ ನಾಯಕ ಕರುಣಾ ನಿಧಿ ಹೇಳಿದ್ದಾರೆ.
 
ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಆಡಳಿತ ಸುಸೂತ್ರಗೊಳಿಸಲು ಮಧ್ಯಂತರ ವ್ಯವಸ್ಥೆ ಮಾಡುವಂತೆ ಕೋರಿ ಕೇಂದ್ರ ಸರಕಾರ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ ಎಂದು ತಿಳಿಸಿದರು.
 
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತಿದೆ ಎಂದು ಗೊತ್ತಾಗುತ್ತಿಲ್ಲ. ಮುಖ್ಯಮಂತ್ರಿ ಜಯಲಲಿತಾ ಅವರು ಆಸ್ಪತ್ರೆಯಲ್ಲಿರುವ ಕಾರಣ ರಾಜ್ಯದ ಎಲ್ಲ ಸಚಿವರು ತಮ್ಮ ಜವಾಬ್ದಾರಿ ಮರೆತು ಆಸ್ಪತ್ರೆಯಲ್ಲೇ ಠಿಕಾಣಿ ಹುಡಿದ್ದಾರೆ. ಮುಖ್ಯಮಂತ್ರಿ ಖಾತೆ ಸಚಿತ ಹಲವು ಖಾತೆಗಳ ಕಡತಗಳು ಹಾಗೇ ಬಿದ್ದುಕೊಂಡಿದೆ. ಇವೆಲ್ಲ ಕಡತಗಳ ವಿಲೇವಾರಿ ಹೇಗೆ ನಡೆಯುತ್ತದೆ. ರಾಜ್ಯದ ಆಡಳಿತ ಸ್ಥಿತಿಯನ್ನು ಅರಿಯುವ ಹಕ್ಕು ಸಾರ್ವಜನಿಕರಿಗಿದೆ ಎಂದು ಡಿಎಂಕೆ ನಾಯಕ ಕರುಣಾ ನಿಧಿ ಹೇಳಿದರು. 
 
ಜಯಲಲಿತಾ ಕಳೆದ ಸೆಪ್ಟೆಂಬರ್ 22 ರಂದು ನಿರ್ಜಲೀಕರಣ ಮತ್ತು ಜ್ವರದ ಬಾಧೆಗೊಳಗಾಗಿ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಕೆಲವು ದಿನಗಳ ಮಟ್ಟಿಗೆ ಅವರನ್ನು ನಿಗಾವಣೆಯಲ್ಲಿ ಇಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದವು. ಆದರೆ ಅವರ ಆರೋಗ್ಯದ ಕುರಿತಾದ ಯಾವುದೇ ನಂಬಲರ್ಹ ವರದಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ