ನ್ಯಾಯಾಧೀಶರ ಮುಂದೆಯೇ ಮಹಿಳೆ ಜೊತೆ ಅಸಭ್ಯ ವರ್ತನೆ: ವಕೀಲ ಸಸ್ಪೆಂಡ್
ಆರ್.ಡಿ. ಸಂತಾನ ಕೃಷ್ಣನ್ ಅಮಾನತುಗೊಂಡ ವಕೀಲ. ನ್ಯಾಯಾಧೀಶರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಿಳೆಯ ವಿಚಾರಣೆ ನಡೆಸುತ್ತಿದ್ದಾಗ ಈ ವಕೀಲ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಹೀಗಾಗಿ ಮದ್ರಾಸ್ ಹೈಕೋರ್ಟ್ ಈತನನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸುವಂತೆ ತಮಿಳುನಾಡು ಬಾರ್ ಕೌನ್ಸಿಲ್ ಗೆ ಸೂಚನೆ ನೀಡಿದೆ.