ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿದ ಶಾಸಕನಿಗೆ ಸಿಎಂ ಯೋಗಿ ಕರೆ

ಬುಧವಾರ, 10 ಮೇ 2017 (20:31 IST)
ಸೇವಾ ನಿಯಮ ಉಲ್ಲಂಘಿಸಿದ ಮಹಿಳಾ ಐಪಿಎಸ್ ಅಧಿಕಾರಿ ಚಾರು ನಿಗಮ್ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಜೀವಂತವಾಗಿ ಚರ್ಮ ಸುಲಿಯುತ್ತೇನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಬಿಜೆಪಿ ಶಾಸಕ ರಾಧಾ ಮೋಹನ್ ದಾಸ್ ಅಗರ್‌ವಾಲ್‌ಗೆ, ಸಿಎಂ ಯೋಗಿ ಆದಿತ್ಯನಾಥ್ ಕೂಡಲೇ ತಮ್ಮನ್ನು ಭೇಟಿಯಾಗುವಂತೆ ಆದೇಶಿಸಿದ್ದಾರೆ.  
 
ಅನಧಿಕೃತ ಮದ್ಯದಂಗಡಿಗಳನ್ನು ಮುಚ್ಚುವಂತೆ ಒತ್ತಾಯಿಸಿ ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಶಾಸಕ ಅಗರ್‌ವಾಲ್ ವರ್ತನೆ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿತ್ತು.
 
ಸೇವಾ ನೀತಿಗಳನ್ನು ಉಲ್ಲಂಘಿಸಿದ ಮಹಿಳಾ ಐಪಿಎಸ್ ಅಧಿಕಾರಿ ವಿರುದ್ಧ ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದರಿಂದ ಆಕೆ ಉದ್ಯೋಗ ಕಳೆದುಕೊಳ್ಳುತ್ತಾಳೆ. ನಿನ್ನನ್ನು ಜೀವಂತವಾಗಿ ಚರ್ಮ ಸುಲಿಯುತ್ತೇನೆ ಎಂದು ಪೊಲೀಸ್ ಮಹಾನಿರ್ದೇಶಕ, ಉಪ ಪೊಲೀಸ್ ಮಹಾನಿರ್ದೇಶಕರಿಗೆ ಶಾಸಕರು ಬೆದರಿಕೆ ಹಾಕಿರುವ ವಿಡಿಯೋ ಇದೀಗ ವೈರಲ್ ಆಗಿತ್ತು 
 
ಮುಖ್ಯಮಂತ್ರಿ ಆದಿತ್ಯನಾಥ್, ಅಗರ್‌ವಾಲ್ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದ ನಂತರ ಪ್ರತಿಭಟನೆಯನ್ನು ಅಂತ್ಯಗೊಳಿಸಿ ಸಿಎಂ ಭೇಟಿಗೆ ತೆರಳಿದ್ದಾರೆ.
 
ಅನಧಿಕೃತ ಮದ್ಯದಂಗಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸುತ್ತೇನೆ ಎಂದು ಶಾಸಕ ರಾಧಾ ಮೋಹನ್ ಅಗರ್‌ವಾಲ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ