ನವಜೋತ್ ಸಿಂಗ್ ಸಿದ್ದು ನಂತ್ರ ಕೀರ್ತಿ ಆಜಾದ್ ಪತ್ನಿ ಆಪ್ ಪಕ್ಷಕ್ಕೆ ಸೇರ್ಪಡೆ
ಮಂಗಳವಾರ, 19 ಜುಲೈ 2016 (16:19 IST)
ರಾಜ್ಯಸಭೆ ಸದಸ್ಯ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ದು ಬಿಜೆಪಿಗೆ ರಾಜೀನಾಮೆ ನೀಡಿದ ಮಾರನೇ ದಿನವೇ ಅಮಾನತ್ತುಗೊಂಡಿರುವ ಬಿಜೆಪಿ ಸಂಸದ ಕೀರ್ತಿ ಆಜಾದ್ ಪತ್ನಿ ಕೂಡಾ ಆಮ್ ಆದ್ಮಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರಿಂದ ಅಮಾನತ್ತುಗೊಂಡಿರುವ ಬಿಜೆಪಿ ಸಂಸದ ಕೀರ್ತಿ ಆಜಾದ್ ಅವರ ಪತ್ನಿ ಪೂನಮ್ ಝಾ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ.
ಪತ್ನಿ ಪೂನಮ್ ಝಾ ಆಪ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆಯೇ ಎನ್ನುವ ವರದಿಗಳನ್ನು ತಳ್ಳಿಹಾಕದ ಆಜಾದ್, ಅದು ಅವರ ವೈಯಕ್ತಿಕ ನಿರ್ಧಾರವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಮುಂಗಾರು ಅಧಿವೇಶನದ ಆರಂಭದ ದಿನದಂದು ನವಜೋತ್ ಸಿಂಗ್ ಸಿದ್ದು, ವೈಯಕ್ತಿಕವಾಗಿ ರಾಜ್ಯಸಭೆಯ ಸಭಾಪತಿ ಹಮೀದ್ ಅನ್ಸಾರಿಯವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ನಂತರ, ರಾಜ್ಯಸಭೆಯ ಉಪಸಭಾಪತಿ ಪಿ.ಜೆ.ಕುರಿಯನ್, ಸಿದ್ದು ರಾಜೀನಾಮೆ ನೀಡಿರುವ ಬಗ್ಗೆ ಸದನದಲ್ಲಿ ಘೋಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.