ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದು, ನಂತರವಷ್ಟೆ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆಯವರ ಅಭಿಪ್ರಾಯವನ್ನು ಪರಿಗಣಿಸಿದ್ದ ಸೋನಿಯಾ, ಸಂಪುಟ ಪುನಾರಚನೆಯಲ್ಲೂ ಅವರ ಅಭಿಪ್ರಾಯವನ್ನು ಗಂಭೀರವಾಗಿ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.