ಭಾರತದ ಸಾಮಾಜಿಕ ನೀತಿಗೆ ವಿರುದ್ಧ, ಎಲ್ಲಾ ಅರ್ಜಿ ವಜಾಗೊಳಿಸಿ : ಕೇಂದ್ರ ಸರ್ಕಾರ

ಮಂಗಳವಾರ, 18 ಏಪ್ರಿಲ್ 2023 (10:54 IST)
ನವದೆಹಲಿ : ಸಲಿಂಗ ವಿವಾಹಕ್ಕೆ ಮಾನ್ಯತೆ ಕೋರಿ ಸುಪ್ರೀಂ ಕೋರ್ಟ್ ಸಂವಿಧಾನಿಕ ಪೀಠದ ವಿಚಾರಣೆಗೂ ಮುನ್ನ ಇದೀಗ ಕೇಂದ್ರ ಮತ್ತೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವುದನ್ನು ವಿರೋಧಿಸಿದೆ.
 
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠ ಏಪ್ರಿಲ್ 18ರಂದು ಈ ಕುರಿತು ವಿಚಾರಣೆ ನಡೆಸಲಿದೆ. ಈ ಬಗ್ಗೆ ವಿಚಾರಣೆಗೆ ಒಂದು ದಿನ ಬಾಕಿ ಇರುವಾಗಲೇ ಕೇಂದ್ರ ಸಲಿಂಗ ವಿವಾಹ ಸಾಮಾಜಿಕ ನೀತಿಗೆ ವಿರುದ್ಧವಾಗಿದೆ. ಇದನ್ನು ಸಮಾಜಮುಖಿಯಾಗಿ ಅನೇಕರು ವಿರೋಧ ಮಾಡುತ್ತಾರೆ ಎಂದು ಹೇಳಿದೆ.

ಇದು ಭಿನ್ನ ಲಿಂಗೀಯ ಮದುವೆಯ ಮೇಲೆ ದೊಡ್ಡ ಪರಿಣಾಮವನ್ನು ಉಂಟುಮಾಡುತ್ತದೆ. ಸಲಿಂಗಿಗಳ ಮದುವೆ ಪರಿಕಲ್ಪನೆ ಹೊಸ ಸಾಮಾಜಿಕ ಸಂಸ್ಥೆಯನ್ನು ರಚಿಸುತ್ತದೆ. ಇದು ಮೂಲಭೂತವಾಗಿ ಶಾಸಕಾಂಗದ ಕಾರ್ಯವಾಗಿದ್ದು ನ್ಯಾಯಾಲಯಗಳು ನಿರ್ಧರಿಸುವ ವಿಷಯವಲ್ಲ.

ಜನರ ಹಿತದೃಷ್ಟಿಯಿಂದ ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕು ಹಾಗೂ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ವಜಾಗೊಳಿಸುವಂತೆ ಕೇಂದ್ರ ಸರ್ಕಾರದ ಅರ್ಜಿಯಲ್ಲಿ ಮನವಿ ಮಾಡಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ