ಛತ್ತೀಸ್‌ಗಡ: ಅಪರಿಚಿತ ವ್ಯಕ್ತಿಗಳ ಅನುಮಾನಾಸ್ಪದ ನಡುವಳಿಕೆಯನ್ನು ಕಂಡು ಗುಮಾನಿಯ ಮೇಲೆ ವಿಚಾರಣೆ ನಡೆಸಲಾಗಿತ್ತು. ಪೊಲೀಸ್ ಇಲಾಖೆ ಮತ್ತು ಎಸಿಸಿಯು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 2.64 ಕೋಟಿ ಅಕ್ರಮ ಹಣವನ್ನು ವಶಪಡಿಸಿಕೊಂಡಿರುವ ಘಟನೆ ಛತ್ತೀಸ್ ಘಡದ ಭಿಲಾಯ್ ಭಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಣವನ್ನು ವಶಪಡಿಸಿಕೊಂಡು ಮೂವರು ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಹಣದ ಮೂಲವನ್ನು ಪತ್ತೆ ಹಚ್ಚಲು ತನಿಖೆ ಪ್ರಾರಂಭಿಸಲಾಗಿದೆ ಎಂದು ಭಿಲಾಯ್ ನಗರ ಸಿಎಸ್‌ಪಿ ಮಾಹಿತಿ ನೀಡಿದ್ದಾರೆ.