ಅಗ್ನಿಪಥ್ ಯೋಜನೆಯ ವಯೋಮಿತಿ ವಿಸ್ತರಣೆ !

ಶನಿವಾರ, 25 ಜೂನ್ 2022 (13:55 IST)
ನವದೆಹಲಿ : ಭಾರತೀಯ ಸೇನೆಯ ಅಗ್ನಿಪಥ್ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ಕೇಂದ್ರ ಸರ್ಕಾರ ಘೋಷಷಣೆ ಮಾಡಿದೆ.

ಸಶಸ್ತ್ರ ಪಡೆಗಳಲ್ಲಿ ಎಲ್ಲ ಹೊಸ ನೇಮಕಾತಿಗಳ ವಯೋಮಿತಿಯನ್ನ ಹದಿನೋಳುವರೆ(17) ವರ್ಷದಿಂದ - 21 ವರ್ಷಗಳು ಎಂದು ಮೊದಲು ನಿಗದಿ ಮಾಡಲಾಗಿತ್ತು.

ಕಳೆದ ಎರಡು ವರ್ಷಗಳಲ್ಲಿ ಮಹಾಮಾರಿ ಕೊರೋನಾ ಹಾವಳಿಯಿಂದಾಗಿ ನೇಮಕಾತಿಯನ್ನು ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ದರಿಂದ 2022ರ ಅಗ್ನಿಪಥ್ ಯೋಜನೆಗೆ ನೇಮಕಾತಿ ಪ್ರಕ್ರಿಯೆಗೆ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

 
ಅಗ್ನಿಪಥ್ ಯೋಜನೆಗೆ 21 ವರ್ಷದಿಂದ 23 ವರ್ಷಗಳಿಗೆ ವಿಸ್ತರಿಸುವ ಮೂಲಕ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸರ್ಕಾರವು ಒಂದು ಬಾರಿ ಮನ್ನಾ ಮಾಡುವ ನಿರ್ಧಾರ ಮಾಡಿದೆ. ಕಳೆದ ಎರಡು ವರ್ಷಗಳಲ್ಲಿ ಯಾವುದೇ ನೇಮಕಾತಿ ನಡೆಯದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಕ್ಷಣಾ ಸಚಿವಾಲಯ ಕೂಡ ತಿಳಿಸಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ