ಅಪರಾಧಿಗಳ ಬಿಡುಗಡೆ ಅರ್ಜಿ ವಿಚಾರಣೆಗೆ ಒಪ್ಪಿಗೆ : ಸುಪ್ರೀಂ

ಭಾನುವಾರ, 28 ಆಗಸ್ಟ್ 2022 (10:10 IST)
ನವದೆಹಲಿ : ಬಿಲ್ಕಿಸ್ ಬಾನು ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
 
ಪ್ರಕರಣಕ್ಕೆ ಸಂಬಂಧಿಸಿ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿತ್ತು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪಾಲಿಟ್ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಇತರ ಅರ್ಜಿದಾರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. 

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠದ ಮುಂದೆ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ ಮತ್ತು ಅಪರ್ಣಾ ಭಟ್ ಅವರು ಮೇಲ್ಮನವಿ ಅರ್ಜಿ ಪ್ರಸ್ತಾಪ ಮಾಡಿದರು. ಈ ವೇಳೆ, ಪ್ರಕರಣ ಪರಿಶೀಲಿಸುವುದಾಗಿ ಪೀಠವು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ