ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ವರ್ಷವಿಡೀ ನಡೆದ ಪ್ರತಿಭಟನೆ ಸಂದರ್ಭ 700ಕ್ಕೂ ಅಧಿಕ ರೈತರು ಮೃತಪಟ್ಟಿದ್ದು,ಅವರ ಕುಟುಂಬಗಳಿಗೆ ಪಿಎಂ ಕೇರ್ಸ್ ನಿಧಿಯಿಂದ ಆರ್ಥಿಕ ನೆರವನ್ನು ಒದಗಿಸಬೇಕು ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್ ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ರಾವತ್, ಮೃತ ರೈತರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸಬೇಕು ಎಂಬ ಒತ್ತಾಯ ದೇಶದ ವಿವಿಧೆಡೆಗಳಿಂದ ಕೇಳಿಬರುತ್ತಿದೆ. ಪಿಎಂ ಕೇರ್ಸ್ ನಿಧಿಯಲ್ಲಿ ಲೆಕ್ಕವಿಲ್ಲದಿರುವ ಹಣವಿದೆ, ಈ ಹಣವನ್ನು ಮೃತ ರೈತರ ಕುಟುಂಬಗಳಿಗೆ ಪರಿಹಾರವನ್ನು ನೀಡಲು ಬಳಸಬೇಕು ಅಂತಾ ಸಂಜಯ್ ರಾವತ್ ಒತ್ತಾಯ ಮಾಡಿದ್ದಾರೆ.