ಅಹಮ್ಮದಾಬಾದ್: ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತವಾದ ಸ್ಥಳಕ್ಕೆ ಇಂದು ಪ್ರಧಾನಿ ಮೋದಿ ಬೆಳ್ಳಂ ಬೆಳಿಗ್ಗೆಯೇ ಓಡೋಡಿ ಬಂದಿದ್ದಾರೆ.
ನಿನ್ನೆ ಮಧ್ಯಾಹ್ನ 1.39 ರ ಸುಮಾರಿಗೆ ಆಗ ತಾನೇ ಅಹಮ್ಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ತೆರಳಲು ಟೇಕ್ ಆಫ್ ಆಗಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿತ್ತು. ದರುಂತದಲ್ಲಿ ಸಾವನ್ನಪ್ಪಿದವರ ನಿಖರ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ.
ಭಾರತ ಕಂಡ ಎರಡನೇ ಅತೀ ದೊಡ್ಡ ವಿಮಾನ ದುರಂತ ಇದಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಗೃಹಸಚಿವ ಅಮಿತ್ ಶಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದರು. ಅಲ್ಲದೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದರು.
ಇದು ಪ್ರಧಾನಿ ಮೋದಿ ತವರಿನಲ್ಲೇ ನಡೆದ ದೊಡ್ಡ ದುರಂತ. ಹೀಗಾಗಿ ಇಂದು ಪ್ರಧಾನಿ ಮೋದಿ ಸ್ವತಃ ತಾವೇ ಖುದ್ದಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ವಿಮಾನ ಮೆಡಿಕಲ್ ಕಾಲೇಜು ಹಾಸ್ಟೆಲ್ ಮೇಲೆ ಬಿದ್ದಿತ್ತು. ಹೀಗಾಗಿ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ.
ವಿಮಾನ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದವರ ಯೋಗ ಕ್ಷೇಮ ವೀಕ್ಷಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
#WATCH | PM Modi arrives at Ahmedabad Civil Hospital to meet those injured in AI-171 plane crash
Gujarat CM Bhupendra Patel, Union Civil Aviation Minister Ram Mohan Naidu Kinjarapu, Union MoS Murlidhar Mohol and State Home Minister Harsh Sanghavi are also present pic.twitter.com/vrQQYNXvc9