ಅಜಿತ್ ಪವಾರ್ : 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಕೆ

ಸೋಮವಾರ, 3 ಜುಲೈ 2023 (10:32 IST)
ಮುಂಬೈ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸರ್ಕಾರದಲ್ಲಿ ಡಿಸಿಎಂ ಪಟ್ಟ ಅಲಂಕರಿಸಿರುವ ಅಜಿತ್ ಪವಾರ್ ವಿರುದ್ಧ ಸ್ಪೀಕರ್ ರಾಹುಲ್ ನಾರ್ವೇಕರ್ ಗೆ  ಅನರ್ಹತೆ ಅರ್ಜಿ ಸಲ್ಲಿಕೆಯಾಗಿದೆ.

ಅಜಿತ್ ಪವಾರ್ ಹಾಗೂ 9 ಶಾಸಕರ ವಿರುದ್ಧ ಎನ್ಸಿಪಿ ಪಕ್ಷವು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆ ಅರ್ಜಿ ಸಲ್ಲಿಸಿದೆ ಎಂದು ಮಹಾರಾಷ್ಟ್ರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಯಂತ್ ಪಾಟೀಲ್ ತಿಳಿಸಿದ್ದಾರೆ.

ಅಜಿತ್ ಪವಾರ್ ಹಾಗೂ 9 ಮಂದಿ ಶಾಸಕರ ನಡೆಯು ಕಾನೂನುಬಾಹಿರವಾಗಿದೆ. ಅಲ್ಲದೆ ಅವರು ಶರದ್ ಪವಾರ್ ಮತ್ತು ಪಕ್ಷವನ್ನು ಕತ್ತಲೆಯಲ್ಲಿಟ್ಟಿದ್ದರಿಂದ ಜಯಪ್ರಕಾಶ್ ದಂಡೆಗಾಂವ್ಕರ್ ನೇತೃತ್ವದ ಪಕ್ಷದ ಶಿಸ್ತು ಸಮಿತಿಗೆ ದೂರು ನೀಡಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ