ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿರುವ ಅಖಿಲೇಶ್ ಯಾದವ್

ಶನಿವಾರ, 11 ಮಾರ್ಚ್ 2017 (10:48 IST)
ನವದೆಹಲಿ: ಚುನಾವಣೆ ಫಲಿತಾಂಶಗಳು ಬಿಜೆಪಿಗೆ ಸ್ಪಷ್ಟ ಮುನ್ನಡೆ ತೋರಿಸುತ್ತಿದ್ದಂತೆ, ಇತ್ತ ಸಿಎಂ ಅಖಿಲೇಶ್ ಯಾದವ್ ತಮ್ಮ ಸ್ಥಾನಕ್ಕೆ ಇಂದು ಮಧ್ಯಾಹ್ನ ರಾಜೀನಾಮೆ ಸಲ್ಲಿಸಲಿರುವ ಸಾಧ್ಯತೆ ಕಂಡುಬರುತ್ತಿದೆ.

 
ಒಟ್ಟು 403 ಸ್ಥಾನಗಳ ಪೈಕಿ ಬಿಜೆಪಿ ಮುನ್ನೂರಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸ್ಪಷ್ಟ ಬಹುಮತ ಸಾಧಿಸುವತ್ತ ಸಾಗಿದೆ. ಆಡಳಿತಾರೂಢ ಸಮಾಜವಾದಿ ಪಕ್ಷ ಇನ್ನೂ 100 ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿಲ್ಲ.

ಹೀಗಾಗಿ 26 ವರ್ಷಗಳ ನಂತರ ಬಿಜೆಪಿ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಹಾಲಿ ಸಿಎಂ ಅಖಿಲೇಶ್ ಯಾದವ್  ಸೋಲಿನ ಹೊಣೆ ಹೊತ್ತು ಇಂದು ಮಧ್ಯಾಹ್ನವೇ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುತ್ತಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ