ಎಲ್ಲಾ ರಾಜಕೀಯ ಪಕ್ಷಗಳು ಸಮ್ಮತಿಸಿದರೆ `ಜಾತಿ ಗಣತಿ' ಗೆ ಒಪ್ಪಿಗೆ : ಮಮತಾ ಬ್ಯಾನರ್ಜಿ
ಮಂಗಳವಾರ, 24 ಆಗಸ್ಟ್ 2021 (11:15 IST)
ಕೋಲ್ಕತ್ತ : ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದಲ್ಲಿ 10 ಪಕ್ಷಗಳ ನಿಯೋಗವು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಜಾತಿ ಗಣತಿಗಾಗಿ ಒತ್ತಾಯಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹ ಜಾತಿಗಣತಿಗೆ ಒಪ್ಪಿಗೆ ಸೂಚಿಸಿದ್ದಾರೆ.
ಜಾತಿ ಗಣತಿ ಕುರಿತು ಪ್ರತಿಕ್ರಿಯೆ ನೀಡಿದ ಮಮತಾ ಬ್ಯಾನರ್ಜಿ, ಜಾತಿ ಗಣತಿಗೆ ಎಲ್ಲ ರಾಜಕೀಯ ಪಕ್ಷಗಳು ಮತ್ತು ರಾಜ್ಯಗಳು ಸಮ್ಮತಿ ಸೂಚಿಸಿದರೆ ನಾನು ಅದರ ವಿರುದ್ಧ ಹೋರಾಡಲಾರೆ. ರಾಜಕೀಯ ಪಕ್ಷಗಳು, ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸರ್ಕಾರ ಒಮ್ಮತಕ್ಕೆ ಬರಲಿ ಎಂದು ಹೇಳಿದ್ದಾರೆ.
ಜಾತಿ ಆಧಾರಿತ ಜನಗಣತಿಯು ಅಭಿವೃದ್ಧಿ ಯೋಜನೆಯನ್ನು ರೂಪಿಸುವಲ್ಲಿ ನೆರವಾಗಲಿದೆ ಎಂದು ಪ್ರಧಾನಿ ಭೇಟಿ ಬಳಿಕ ನಿತೀಶ್ ಹೇಳಿದ್ದರು.