ಭಾರತ ಮೂಲದ ರಿಷಿ ಸುನಾಕ್ ಬಗ್ಗೆ ನೀವು ತಿಳಿಯಲೇಬೇಕಾದ ಸಂಗತಿ
ಸುನಾಕ್ ಅವರು 2015ರಲ್ಲಿ ರಿಚ್ಮಂಡ್ (ಯಾರ್ಕ್ಸ್) ಕ್ಷೇತ್ರದಿಂದ ಮೊದಲ ಬಾರಿ ಸಂಸದರಾಗಿ ಆಯ್ಕೆಯಾದರು. ಬಳಿಕ 2017 ಹಾಗೂ 2019ರಲ್ಲೂ ಮರು ಆಯ್ಕೆಯಾದರು.
2018ರಲ್ಲಿ ಸಚಿವರಾಗಿ ಸರ್ಕಾರಿ ಸೇವೆಗೆ ಪ್ರವೇಶಿಸಿದ ಸುನಾಕ್ ಅವರನ್ನು 2019ರ ಜುಲೈಯಲ್ಲಿ ಬ್ರಿಟನ್ ಹಣಕಾಸಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಬಳಿಕ 2020ರ ಫೆಬ್ರವರಿಯಲ್ಲಿ ಬ್ರಿಟನ್ನ ಹಣಕಾಸು ಸಚಿವರಾಗಿ ನೇಮಕಗೊಂಡರು.