ಪೊಲೀಸರು ಈ ಸಂಬಂಧ ಪ್ರತಿಕ್ರಿಯಿಸಿದ, ಅದೇ ವೇಳೆ ಅನ್ಯಕೋವಿನ ಯುವಕರು ನಮಾಜ್ ಮಾಡುತ್ತಿದ್ದರು ಎನ್ನಲಾಗಿದ್ದು, ನಮಾಜ್ ಮಾಡುವಾಗ ಜೋರು ಶಬ್ಧ ಕೇಳಿದ್ದರಿಂದ ಆಕ್ರೋಶಗೊಂಡ ಐವರು ಯುವಕರು, ಮುಖೇಶ್ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಬಳಿಕ ಮುಖೇಶ್ ನನ್ನು ಅಂಗಡಿಯಿಂದ ಹೊರ ಎಳೆದು ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಅದರಿಂದ ಮುಖೇಶ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ 5 ಯುವಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
'ಕರ್ನಾಟಕದಲ್ಲಿ ಹನುಮಾನ್ ಚಲೀಸಾ ನಿಷೇಧ ಮಾಡಲಾಗಿದೆಯೇ ಸಿಎಂ ಸಿದ್ದರಾಮಯ್ಯ ನವರೇ? ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ, ಮಿತಿಮೀರಿದ ಓಲೈಕೆಯಿಂದ ಮೂಲಭೂತವಾದಿ ಮುಸ್ಲಿಮರಿಗೆ ನಾವು ಏನು ಮಾಡಿದರೂ ನಡೆಯುತ್ತೆ ಎನ್ನುವ ಮೊಂಡು ಧೈರ್ಯ ಬಂದಿದ್ದು, ಬೆಂಗಳೂರಿನ ಶಿವಾಜಿನಗರದ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಂ ಯುವಕರ ಗುಂಪೊಂದು ಹಿಂದೂಗಳ ಮೇಲೆ ಹಲ್ಲೆ ನಡೆಸಿದೆ. ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಅನ್ನುವುದೇ ಇಲ್ಲದಂತಾಗಿದ್ದು, ಜನಸಾಮಾನ್ಯರು ರಕ್ಷಣೆ ಇಲ್ಲದೆ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.