ಸಿಬಿಐ ಮುಖ್ಯಸ್ಥ ಹುದ್ದೆಯಿಂದ ಅಲೋಕ್‌ ವರ್ಮಾ ವಜಾ

ಶುಕ್ರವಾರ, 11 ಜನವರಿ 2019 (07:55 IST)
ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನು ಉಚ್ಛಾಟಿಸಲಾಗಿದೆ. ಮೋದಿ ನೇತೃತ್ವದ ಆಯ್ಕೆ ಸಮಿತಿ ಈಗ ಅಲೋಕ್‌ ವರ್ಮಾ ಅವರ ಬದಲಿಗೆ ಸಿಬಿಐ ನೂತನ ನಿರ್ದೇಶಕರನ್ನಾಗಿ ನಾಗೇಶ್ವರ್‌ ರಾವ್‌ ಅವರನ್ನೇ ಮುಂದುವರಿಸಲು ನಿರ್ಣಯ ತೆಗೆದುಕೊಂಡಿದೆ.


ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಕಿ. ಸಿಕ್ರಿ., ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇರುವ ಉನ್ನತಾಧಿಕಾರ ಸಮಿತಿ ಗುರುವಾರ ರಾತ್ರಿ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದೆ.


ಕೆಲವು ದಿನಗಳ ಹಿಂದಷ್ಟೇ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ್ದು, ಅಲೋಕ್‌ ವರ್ಮಾ ಅವರನ್ನು ಕಡ್ಡಾಯ ರಜೆ ಕಳುಹಿಸಲು ಕೇಂದ್ರ ಸರಕಾರ ನೀಡಿದ್ದ ಆದೇಶವನ್ನು ರದ್ದುಪಡಿಸಿತ್ತು. ಸಿಬಿಐ ನಿರ್ದೇಶಕರನ್ನಾಗಿ ಅಲೋಕ್‌ ವರ್ಮಾ ಅವರನ್ನು ನೇಮಿಸಿತ್ತು. ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್‌ ತಾಕೀತು ನೀಡಿದ್ದರೂ ಅಲೋಕ್‌ ವರ್ಮಾ ಕೆಲವರು ವರ್ಗಾವಣೆಗೆ ಆದೇಶ ನೀಡಿ ಸರ್ಕಾರವನ್ನು ಎದುರು ಹಾಕಿಕೊಂಡಿದ್ದರು.


ಅಲೋಕ್‌ ವರ್ಮಾ ಅವರನ್ನು ವಜಾ ಮಾಡುವ ನಿರ್ಧಾರಕ್ಕೆ ಕಾಂಗ್ರೆಸ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ