ನಟ ಅಂಬರೀಶ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಸಂತಾಪ

ಭಾನುವಾರ, 25 ನವೆಂಬರ್ 2018 (09:21 IST)
ನವದೆಹಲಿ : ಕನ್ನಡದ ಹಿರಿಯ ನಟ ಅಂಬರೀಶ್ ನಿಧನರಾದ ಹಿನ್ನಲೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.


‘ಅಂಬರೀಶ್ ನಟನೆ ಸದಾ ನೆನಪಿಸುವಂತಹದ್ದು, ದೆಹಲಿಯಲ್ಲಿ ಕರ್ನಾಟಕದ ಪರ ಗಟ್ಟಿ ಧ್ವನಿಯಾಗಿದ್ದರು. ರಾಜಕೀಯದಲ್ಲೂ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅಂಬರೀಶ್ ನಿಧನ ತುಂಬಾ ನೋವು ಉಂಟುಮಾಡಿದೆ. ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಕೊಡಲಿ. ಅಂಬರೀಶ್ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ