‘ತಿರಂಗಾ ಯಾತ್ರೆಗೆ’ ಚಾಲನೆ ನೀಡಿದ ಅಮಿತ್ ಶಾ

ಭಾನುವಾರ, 13 ಆಗಸ್ಟ್ 2023 (13:18 IST)
ಗಾಂಧಿನಗರ : ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಗುಜರಾತ್ನ ಅಹಮದಾಬಾದ್ನಲ್ಲಿ ‘ತಿರಂಗಾ ಯಾತ್ರೆಗೆ’ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ( ಕೂಡಾ ಉಪಸ್ಥಿತರಿದ್ದರು. ಈ ವರ್ಷ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಪ್ರತಿಯೊಬ್ಬರು ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನರಲ್ಲಿ ಮನವಿ ಮಾಡಿದ್ದಾರೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅಮಿತ್ ಶಾ, ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿವೆ. ದೇಶಕ್ಕಾಗಿ ನಾವು ಸಾಯಲು ಸಾಧ್ಯವಿಲ್ಲ. ಆದರೆ ದೇಶಕ್ಕಾಗಿ ಬದುಕುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. 

2022ರ ಸ್ವಾತಂತ್ರ್ಯ ದಿನಾಚರಣೆಯನ್ನು ನೆನಪಿಸಿಕೊಂಡ ಅವರು, 2022ರ ಆಗಸ್ಟ್ 15 ರಂದು ತ್ರಿವರ್ಣ ಧ್ವಜ ಹಾರಿಸದ ಮನೆ ಇಲ್ಲ. ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಿದಾಗ ಇಡೀ ರಾಷ್ಟ್ರವು ತಿರಂಗಮಯವಾಗುತ್ತದೆ. ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಪ್ರಧಾನಿ ಮೋದಿಯವರು ಇಡೀ ರಾಷ್ಟ್ರದಲ್ಲಿ ದೇಶಭಕ್ತಿಯ ಭಾವನೆಯನ್ನು ತುಂಬಲು ಪ್ರಯತ್ನಿಸಿದರು ಎಂದು ಹೇಳಿದರು. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ