ಪಂಜಾಬ್ ನಾಯಕರನ್ನು ಭೇಟಿ ಮಾಡಿದ ಅಮಿತ್ ಶಾ

ಭಾನುವಾರ, 7 ಫೆಬ್ರವರಿ 2016 (12:57 IST)
ಮುಂಬರುವ 2017ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ರಣತಂತ್ರ ರೂಪಿಸುವುದು ಮತ್ತು ನೂತನ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇಂದು ಕೇಂದ್ರ ವಿತ್ತಸಚಿವ ಅರುಣ್ ಜೇಟ್ಲಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿ ಮುಖಂಡ ಕಮಲ್ ಶರ್ಮಾ ರಾಜ್ಯದ್ಯಾಕ್ಷರಾಗುವ ರೇಸ್‌ನಲ್ಲಿಮುಂಚೂಣಿಯಲ್ಲಿದ್ದು, ಅವರೂ ಕೂಡಾ ಸಭೆಯಲ್ಲಿ ಉಪಸ್ಥಿತರಿದ್ದರು ಎನ್ನಲಾಗಿದೆ. 
 
ಪಂಜಾಬ್‌ನ ಮಾಜಿ ರಾಜ್ಯಾಧ್ಯಕ್ಷರಾದ ಅಶ್ವಿನಿ ಶರ್ಮಾ ಮತ್ತು ಅವಿನಾಶ್ ರಾಯ್ ಖನ್ನಾ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಾಮ್‌ಲಾಲ್ ಸಭೆಯಲ್ಲಿ ಹಾಜರಿದ್ದರು.
 
ದೆಹಲಿ ಮತ್ತು ಬಿಹಾರ್ ರಾಜ್ಯದಲ್ಲಿ ಪಕ್ಷದ ಸೋಲಿನ ಕುರಿತು ಪರಾಮರ್ಶೆ ನಡೆಸಿದ ಶಾ, ಪಕ್ಷಕ್ಕೆ ಹಾನಿಯಾಗುವಂತಹ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂದು ಬಿಜೆಪಿ ಮುಖಂಡರಿಗೆ ತಾಕೀತು ಮಾಡಿದ್ದಾರೆ.
 
ಪಕ್ಷದಿಂದ ನಿರ್ಲಕ್ಷ್ಯಗೊಳಗಾಗಿದ್ದ ಕ್ರಿಕೆಟಿಗ ಮಾಜಿ ಸಂಸದ ನವಜೋತ್ ಸಿಂಗ್ ಸಿದ್ಧು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ