ಮೋದಿ ಸರ್ಕಾರವನ್ನು ಪ್ರಶ್ನಿಸಲು ರಾಹುಲ್ ಗಾಂಧಿಗೆ ಹಕ್ಕಿಲ್ಲ: ಅಮಿತ್ ಶಾ

ಗುರುವಾರ, 6 ಸೆಪ್ಟಂಬರ್ 2018 (10:05 IST)
ನವದೆಹಲಿ: ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಪ್ರಶ್ನೆ ಮಾಡುವ ಹಕ್ಕು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಸರ್ಕಾರದ ನಾಲ್ಕು ವರ್ಷದ ಆಡಳಿತದ ಕೆಲಸಗಳ ಪಟ್ಟಿ ಕೇಳುವ ರಾಹುಲ್ ಗಾಂಧಿ ತಮ್ಮ ಪಕ್ಷ ಆರು ದಶಕ ದೇಶ ಆಳಿದಾಗ ಏನು ಅಭಿವೃದ್ಧಿ ಮಾಡಿತು ಎಂದು ಹೇಳಲಿ ನೋಡೋಣ ಎಂದು ಅಮಿತ್ ಶಾ ಸವಾಲು ಹಾಕಿದ್ದಾರೆ.

ಛತ್ತೀಸ್ ಘಡದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ ತಮ್ಮದೇ ಪಕ್ಷದ ಆಡಳಿತಾವಧಿಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿರುವಾಗ ರಾಹುಲ್ ಗಾಂಧಿಗೆ ಮೋದಿ ಸರ್ಕಾರವನ್ನು ಪ್ರಶ್ನಿಸುವ ಹಕ್ಕಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ