ಕಾಶ್ಮೀರದಲ್ಲಿ ರಕ್ತಪಾತವಾಗುತ್ತದೆ ಎಂದಿದ್ದ ರಾಹುಲ್ ಗಾಂಧಿ ಬಗ್ಗೆ ಅಮಿತ್ ಶಾ ಲೇವಡಿ

ಶುಕ್ರವಾರ, 11 ಅಕ್ಟೋಬರ್ 2019 (10:06 IST)
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದಾಗ ರಕ್ತಪಾತವಾಗಬಹುದು ಎಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಗೃಹ ಸಚಿವ  ಅಮಿತ್ ಶಾ ಟೀಕಾಪ್ರಹಾರ ನಡೆಸಿದ್ದಾರೆ.


ಮಹಾರಾಷ್ಟ್ರದಲ್ಲಿ ಸಮಾವೇಶವೊಂದರಲ್ಲಿ ಮಾತನಾಡಿದ ಅಮಿತ್ ಶಾ ‘ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡುವ ಘೋಷಣೆ ಮಾಡಿದಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲ್ಲಿ ರಕ್ತಪಾತವಾಗಬಹುದು ಎಂದಿದ್ದರು. ಆದರೆ ವಿಶೇಷ ಸ್ಥಾನ ಮಾನ ರದ್ದು ಮಾಡಿದ ಬಳಿಕ ಅಲ್ಲಿ ರಕ್ತಪಾತ ಬಿಡಿ, ಒಂದೇ ಒಂದು ಬುಲೆಟ್ ಹಾರಲಿಲ್ಲ’ ಎಂದು ಅಮಿತ್ ಶಾ ಲೇವಡಿ ಮಾಡಿದ್ದಾರೆ.

‘ಆರ್ಟಿಕಲ್ 370 ರದ್ದು ಮಾಡುವ ಪ್ರಸ್ತಾವನೆಯಿಟ್ಟಾಗ ರಾಹುಲ್ ಮತ್ತು ಎನ್ ಸಿಪಿಯ ಶರದ್ ಪವಾರ್ ವಿರೋಧ ವ್ಯಕ್ತಪಡಿಸಿದ್ದರು. ಇವರಿಬ್ಬರೂ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು ಯಾಕೆ ಎಂದು ಮಹಾರಾಷ್ಟ್ರ ಜನತೆಗೆ ತಿಳಿಸಬೇಕು’ ಎಂದು ಅಮಿತ್ ಶಾ ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ