ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ?

ಮಂಗಳವಾರ, 11 ಅಕ್ಟೋಬರ್ 2022 (14:42 IST)
ನವದೆಹಲಿ : ಎಸಿಬಿಯನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಎಲ್ಲ ಖಾಸಗಿ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.

ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಡಿ.ವೈ. ಚಂದ್ರಚೂಡ್ ನೇತೃತ್ವದ ದ್ವಿಸದಸ್ಯ ಪೀಠ ಮಧ್ಯಪ್ರದೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಿತು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಕನಕರಾಜು ಮತ್ತು ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ. ಶಶಿಧರ್ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿಗಳನ್ನು ಸಲ್ಲಿಸಿದರು.

ವಿಚಾರಣೆ ವೇಳೆ ಎಸಿಬಿಯಲ್ಲಿರುವ ಅರ್ಜಿಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸುವುದಾಗಿ ಹೈಕೋರ್ಟ್ ಹೇಳಿದೆ. ಇದರಿಂದ ದೂರುದಾರರಿಗೆ ಏನು ಅನ್ಯಾಯ ಆಗಿದೆ ಎಂದು ಪೀಠ ಪ್ರಶ್ನಿಸಿತು.

ಅರ್ಜಿ ಸಲ್ಲಿಸಿದ ನಿಮ್ಮಗೆ ಏನು ಸಮಸ್ಯೆಯಾಗಿದೆ. ಲೋಕಾಯುಕ್ತಕ್ಕೆ ಅಧಿಕಾರ ವರ್ಗಾವಣೆಯಾಗುತ್ತಿರುವ ಹಿನ್ನಲೆಯಲ್ಲಿ ನಾವು ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ ಎಂದು ಹೇಳಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ