ಕತ್ತು ಸೀಳಿ ಐಪಿಎಸ್ ಅಧಿಕಾರಿ ಹತ್ಯೆ!

ಮಂಗಳವಾರ, 4 ಅಕ್ಟೋಬರ್ 2022 (12:21 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಾರಾಗೃಹದ ಹಿರಿಯ ಅಧಿಕಾರಿ ಹೇಮಂತ್ ಲೋಹಿಯಾ ಅವರನ್ನು ನಿವಾಸದಲ್ಲಿ ಕತ್ತು ಸೀಳಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
1992ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕತ್ತು ಸೀಳಿ ಅವರನ್ನು ಹತ್ಯೆ ಮಾಡಲಾಗಿದೆ.

ಅವರನ್ನು ಆಗಸ್ಟ್ನಲ್ಲಿ ಜಮ್ಮು ಮತ್ತು ಕಾಶ್ಮೀರದ ಜೈಲುಗಳ ಮಹಾನಿರ್ದೇಶಕರಾಗಿ ನೇಮಿಸಲಾಗಿತ್ತು. ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಮಾತನಾಡಿ, ಮನೆಯ ಸಹಾಯಕ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ