ಆಂಧ್ರಪ್ರದೇಶ ಔಷಧ ತಯಾರಿಕಾ ಕಂಪನಿಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆ 13ಕ್ಕೆ ಏರಿಕೆ

Sampriya

ಬುಧವಾರ, 21 ಆಗಸ್ಟ್ 2024 (22:07 IST)
Photo Courtesy X
ಆಂಧ್ರಪ್ರದೇಶ: ಇಲ್ಲಿನ ಔಷಧ ತಯಾರಿಕಾ ಕಂಪನಿಯ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಘಟನೆಯಲ್ಲಿ 33 ಮಂದಿ ಗಾಯಗೊಂಡಿದ್ದು, ಅವರನ್ನು ಅನಕಪಲ್ಲಿ ಮತ್ತು ಅಚ್ಯುತಪುರದ ಆಸ್ಪತ್ರೆಗಳಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಅನಕಪಲ್ಲಿ ಜಿಲ್ಲೆಯ ಅಚ್ಯುತಪುರದ ಎಸೈನ್ಷಿಯಾ ಅಡ್ವಾನ್ಸ್ಡ್ ಸೈಯನ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ.  ಸುಮಾರು 381 ಮಂದಿ ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲಿ ಮಧ್ಯಾನದ ಊಟದ ವೇಳೆ ಸ್ಫೋಟ ಸಂಭವಿಸಿದ್ದರಿಂದ ಕಡಿಮೆ ಸಂಖ್ಯೆಯಲ್ಲಿ ಸಿಬ್ಬಂದಿಗಳಿದ್ದರು.

ಈ ಅವಘಡಕ್ಕೆ 'ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಕಾರಣ ಎನ್ನಲಾಗಿದೆ.  'ಬೆಂಕಿ ನಂದಿಸಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಘಟಕದೊಳಗೆ ಸಿಲುಕಿಕೊಂಡಿದ್ದ 13 ಜನರನ್ನು ರಕ್ಷಿಸಲಾಗಿದೆ' ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಘಟನೆಗೆ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ