ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧವನ್ನು ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಎಕೆ ಆ್ಯಂಟನಿ ಪುತ್ರ ಅನಿಲ್ ಕೆ ಆಂಟನಿಯವರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ರಾಜೀನಾಮೆ ಪತ್ರವನ್ನು ಹಂಚಿಕೊಂಡಿರುವ ಅನಿಲ್ ಆ್ಯಂಟನಿ, ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ಪ್ರಧಾನಿ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ ಕುರಿತು ಮಾಡಿರುವ ಟ್ವೀಟ್ ಅನ್ನು ವಾಪಸ್ ಪಡೆಯಬೇಕೆಂಬ” ಅಸಹಿಷ್ಣುತೆಯ ಫೋನ್ ಕರೆಗಳಿಂದ ಅಸಮಾಧಾನಗೊಂಡಿರುವ ಅನಿಲ್ ಕೆ.ಆ್ಯಂಟನಿ, ಕಾಂಗ್ರೆಸ್ ಪಕ್ಷವನ್ನು ತೊರೆದಿರುವುದಾಗಿ ವರದಿ ತಿಳಿಸಿದೆ. ಪ್ರಧಾನಿ ಮೋದಿ ಹಾಗೂ 2002 ರ ಗುಜರಾತ್ ಗಲಭೆಯ ಬಗ್ಗೆ ಬಿಬಿಸಿಯ ಸಾಕ್ಷ್ಯಚಿತ್ರವನ್ನು ಟೀಕಿಸಿದ್ದ ಅನಿಲ್ ಆ್ಯಂಟನಿಯವರು, "ಭಾರತದ ವಿರುದ್ಧ ಪೂರ್ವಾಗ್ರಹಗಳ ಸುದೀರ್ಘ ಇತಿಹಾಸ" ಹೊಂದಿರುವ ಬಿಬಿಸಿಯನ್ನು ಸರಕಾರಿ ಪ್ರಾಯೋಜಿತ ಚಾನೆಲ್ ಎಂದು ಕರೆದಿದ್ದರು.