ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

Sampriya

ಬುಧವಾರ, 30 ಜುಲೈ 2025 (17:57 IST)
Photo Credit X
ತಮಿಳುನಾಡು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. 

2021 ರಲ್ಲಿ ರಾಜ್ಯ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಅವರು ಈ ವರ್ಷದ ಏಪ್ರಿಲ್‌ನಲ್ಲಿ ಆ ಸ್ಥಾನದಿಂದ ಕೆಳಗಿಳಿದ 40 ವರ್ಷ ವಯಸ್ಸಿನ ಅಣ್ಣಾಮಲೈಗೆ ರಾಷ್ಟ್ರೀಯ ಮಟ್ಟದ ಜವಾಬ್ದಾರಿ ಸಿಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ತಮ್ಮ ಪಾತ್ರದ ಬಗ್ಗೆ ಅಧಿಕೃತ ಘೋಷಣೆಗೆ ಕಾಯುತ್ತಿರುವಾಗ, ಬಿಜೆಪಿ ಭಾಗವಾಗಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮುಂದಿನ ವರ್ಷ ದಕ್ಷಿಣ ರಾಜ್ಯದಲ್ಲಿ ನಡೆಯುವ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಅಣ್ಣಾಮಲೈ ವಿಶ್ವಾಸ ವ್ಯಕ್ತಪಡಿಸಿದರು. 

ನಾವು ಪಕ್ಷದ ಸೈನಿಕರು ಮತ್ತು ಡಿಎಂಕೆಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂಬುದು ಪಕ್ಷಕ್ಕೆ ಸ್ಪಷ್ಟವಾಗಿದೆ. ಪಕ್ಷವೂ ನಿರ್ಧಾರ ಕೈಗೊಂಡಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ನಮ್ಮ ರಾಷ್ಟ್ರೀಯ ನಾಯಕರು ನಿರ್ಧಾರ ಮಾಡಿದ್ದಾರೆ ಎಂದು ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ